ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಬೆಟ್ಟದ ಕಳ್ಳ

ಪೋಸ್ಟ್ ಶೇರ್ ಮಾಡಿ

ಕೊಯಮತ್ತೂರಿನ ಪಕ್ಷಿರಾಜ ಸ್ಟುಡಿಯೋದಲ್ಲಿ ‘ಬೆಟ್ಟದ ಕಳ್ಳ’ (1957) ಚಿತ್ರೀಕರಣದ ಸಂದರ್ಭ. ನಿರ್ದೇಶಕ ಶ್ರೀರಾಮುಲು ನಾಯ್ಡು ಅವರು ಚಿತ್ರದ ಕಲಾವಿದರಾದ ಆರ್.ನಾಗೇಂದ್ರರಾಯರು ಮತ್ತು ಉದಯಕುಮಾರ್ ರನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಪಕರೂ ಆದ ಶ್ರೀರಾಮುಲು ನಾಯ್ಡು ಪಕ್ಷಿರಾಜ ಸ್ಟುಡಿಯೋ ಮಾಲೀಕರೂ ಹೌದು. ಮುಂದಿನ ದಿನಗಳಲ್ಲಿ ಪಕ್ಷಿರಾಜ ಸ್ಟುಡಿಯೋ ಬೆಂಗಳೂರಿಗೆ (ಕನ್ನಿಂಗ್ ಹ್ಯಾಂ ರಸ್ತೆ) ಶಿಫ್ಟ್ ಆಗಿ ಚಾಮುಂಡೇಶ್ವರಿ ಸ್ಟುಡಿಯೋ ಎಂದು ಮರುನಾಮಕರಣಗೊಂಡಿತು. ಮೊದಲು ಒಂದು ಫ್ಲೋರ್ ಇದ್ದ ಸ್ಟುಡಿಯೋದಲ್ಲಿ ನಂತರ ಮೂರು ಫ್ಲೋರ್‍ಗಳಾದವು. ಉತ್ತಮ ಸೌಲಭ್ಯ ಹೊಂದಿದ್ದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನೂರಾರು ಸಿನಿಮಾಗಳು ಚಿತ್ರೀಕರಣಗೊಂಡಿವೆ. ಈಗ ಥಿಯೇಟರ್, ರೆಕಾರ್ಡಿಂಗ್ ಸ್ಟುಡಿಯೋ ಮಾತ್ರ ಉಳಿದಿವೆ.

ಇನ್ನಷ್ಟು ಕಥೆ

ಹೆಳವನಕಟ್ಟೆ ಗಿರಿಯಮ್ಮ

ಸಂಕೇತ್ ಸ್ಟುಡಿಯೋದಲ್ಲಿ ‘ಹೆಳವನಕಟ್ಟೆ ಗಿರಿಯಮ್ಮ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಪಿಬಿಎಸ್ ಜೊತೆ

ಮೂವಿಂಗ್ ಶಾಟ್!

ಈಗ ಸಿನಿಮಾ, ಕಿರುತೆರೆ ಚಿತ್ರೀಕರಣಗಳಲ್ಲಿ ಜಿಮ್ಮೀ ಜಿಬ್ ಸೇರಿದಂತೆ ಆಧುನಿಕ ಪರಿಕರಗಳಿಂದ ಮೂವಿಂಗ್‌

ಕನ್ನಯ್ಯರಾಮ – ಅನಂತನಾಗ್‌

ಆಗಿನ್ನೂ ಅನಂತನಾಗ್ ಕನ್ನಡಿಗರಿಗೆ ಹೆಚ್ಚು ಪರಿಚಿತರಾಗಿರಲಿಲ್ಲ. ‘ಅಂಕುರ್’, ‘ನಿಶಾಂತ್’, ‘ಮಂಥನ್’ ಹಿಂದಿ ಸಿನಿಮಾಗಳು

ಜನಪ್ರಿಯ ಪೋಸ್ಟ್ ಗಳು

ಹಾಡಿನ ಪುಸ್ತಕ

ಹೆಚ್ಚಿನ ಸಂಖ್ಯೆಯ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಲ್ಲದ ಆಗಿನ ಕಾಲದಲ್ಲಿ ಸಿನಿಮಾ ಪ್ರಚಾರಕ್ಕೆ ವಿವಿಧ ತಂತ್ರಗಳ ಮೊರೆಹೋಗಬೇಕಿತ್ತು. ಇಂತಹ ಹಾಡಿನ

ಮೇಕಪ್‌ಮ್ಯಾನ್ ರಾಜಕುಮಾರ್!

ಮೈಸೂರು ಸಮೀಪದ ಮಹದೇವಪುರದಲ್ಲಿ ‘ಮನಮೆಚ್ಚಿದ ಹುಡುಗಿ’ (1987) ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಎಂ.ಎಸ್‌.ರಾಜಶೇಖರ್‌ ನಿರ್ದೇಶನದ ಈ ಸಿನಿಮಾದಲ್ಲಿ ಶಿವರಾಜಕುಮಾರ್ ಮತ್ತು