ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

ಲತಾ ಮಂಗೇಶ್ಕರ್ – 92

‘ಗುರುಕುಲ್‌’ (1930ರ ದಶಕ) ನಾಟಕದಲ್ಲಿ ‘ಕೃಷ್ಣ’ನ ಪಾತ್ರದಲ್ಲಿ ಲತಾ ಮಂಗೇಶ್ಕರ್ ಮತ್ತು ಸುಧಾಮನಾಗಿ ಅವರ ಸಹೋದರಿ ಮೀನಾ ಮಂಗೇಶ್ಕರ್‌. ಭಾರತೀಯ ಸಿನಿಮಾದ ಮೇರು ಗಾಯಕಿ ಲತಾ ಮಂಗೇಶ್ಕರ್ ಅವರಿಂದು (ಸೆಪ್ಟೆಂಬರ್‌ 28) ತೊಂಬತ್ತೆರಡನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಭಾರತದ ಪ್ರಾದೇ‍ಷಿಕ ಭಾಷೆಗಳಲ್ಲದೆ ವಿದೇಶಿ ಭಾಷೆಗಳೂ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಅವರು ಹಾಡಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಲತಾ ಮಂಗೇಶ್ಕರ್‌ ಗಾಯನಕ್ಕಾಗಿ ಮೂರು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿದ್ದಾರೆ. ಲಂಡನ್‌ನ ರಾಯಲ್ ಆಲ್ಬರ್ಟ್‌ ಹಾಲ್‌ನಲ್ಲಿ ಹಾಡಿದ ಮೊದಲ ಭಾರತೀಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಅವರದು. (Photo Curtesy: Film History Pics)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು