ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

‘ಮೆಜೆಸ್ಟಿಕ್- 2’ ಟ್ರೇಲರ್‌ ಬಿಡುಗಡೆ | ಮಾರ್ಚ್‌ನಲ್ಲಿ ಸಿನಿಮಾ ತೆರೆಗೆ

ಪೋಸ್ಟ್ ಶೇರ್ ಮಾಡಿ
'ಮೆಜೆಸ್ಟಿಕ್- 2' ಟ್ರೇಲರ್‌ ಬಿಡುಗಡೆ | ಮಾರ್ಚ್‌ನಲ್ಲಿ ಸಿನಿಮಾ ತೆರೆಗೆ

ರಾಮು ನಿರ್ದೇಶನದ ‘ಮೆಜಸ್ಟಿಕ್‌ 2’ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ. ಭರತ್‌ ಕುಮಾರ್‌ ಮತ್ತು ಸಂಹಿತಾ ವಿನ್ಯಾ ಚಿತ್ರದ ಪ್ರಮುಖ ಪಾತ್ರಧಾರಿಗಳು.

‘ಮೆಜೆಸ್ಟಿಕ್’, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಂಡ ಚಿತ್ರ. ಇದೀಗ ಅದೇ ಹೆಸರಿನ ಮತ್ತೊಂದು ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೇನೆಲ್ಲ ವ್ಯವಹಾರಗಳು, ದಂಧೆಗಳು ನಡೆಯುತ್ತವೆ ಎಂಬುದನ್ನು ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರಕ್ಕೆ ‘ಮೆಜೆಸ್ಟಿಕ್- 2’ ಎನ್ನುವ ಶೀರ್ಷಿಕೆ ಇದ್ದು, ಮೊನ್ನೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ರಾಮು ಚಿತ್ರದ ನಿರ್ದೇಶಕರು.

ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ನಿರ್ಮಿಸಿರುವ ಚಿತ್ರದಲ್ಲಿ ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ ನಾಯಕನಾಗಿ ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರವ ನಿರ್ವಹಿಸಿದ್ದಾರೆ. ಅಲ್ಲದೆ ಮತ್ತೊಬ್ಬ ನಟಿ ಮಾಲಾಶ್ರೀ ಅವರು ಕೂಡ ಚಿತ್ರದಲ್ಲಿದ್ದಾರೆ. ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ವಿನು ಮನಸು ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ವೀನಸ್ ಮೂರ್ತಿ, ಅಸೋಸಿಯೇಟ್ ಡೈರೆಕ್ಟರ್‌ ಆಗಿ ವಿಜಯಕುಮಾರ್, ಸಾಹಸ ನಿರ್ದೇಶಕರಾಗಿ ಚಿನ್ನಯ್ಯ ಕೆಲಸ ಮಾಡಿದ್ದಾರೆ.

ಈ ಬರಹಗಳನ್ನೂ ಓದಿ