ರಾಮ್ ಚರಣ್ ಅಭಿನಯದ ‘ಪೆದ್ದಿ’ ಸ್ಪೋರ್ಟ್ಸ್ ಆಕ್ಷನ್ ಡ್ರಾಮಾ ತೆಲುಗು ಸಿನಿಮಾ ‘ಪೆದ್ದಿ’ ಇದೇ ಜೂನ್ 4ರಂದು ತೆರೆಕಾಣಲಿದೆ. ಬುಚ್ಚಿ ಬಾಬು ಸನಾ ನಿರ್ದೇಶನದ ಚಿತ್ರದಲ್ಲಿ ಕನ್ನಡ ನಟ ಶಿವರಾಜಕುಮಾರ್ ವಿಶೇಷ ಪಾತ್ರದಲ್ಲಿದ್ದಾರೆ.
ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ಸ್ಪೋರ್ಟ್ ಆಕ್ಷನ್ ಡ್ರಾಮಾ ‘ಪೆದ್ದಿ’ ತೆಲುಗು ಸಿನಿಮಾದ ಶೂಟಿಂಗ್ ಮುಗಿದಿದೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಜೂನ್ 4ಕ್ಕೆ ವಿಶ್ವಾದ್ಯಂತ ‘ಪೆದ್ದಿ’ ಸಿನಿಮಾ ತೆರೆಗೆ ಎಂಟ್ರಿ ಕೊಡಲಿದೆ. ‘ಉಪ್ಪೆನ’ ಸಿನಿಮಾ ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಜಗಪತಿ ಬಾಬು, ದಿವೇಂದು ಶರ್ಮಾ ಚಿತ್ರದ ಇತರೆ ಪ್ರಮುಖ ಪಾತ್ರಧಾರಿಗಳು. ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ, ನವೀಲ್ ನೂಲಿ ಸಂಕಲನ ಚಿತ್ರಕ್ಕಿದೆ.







