ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

‘ರೋಲೆಕ್ಸ್’ನಲ್ಲಿ ಕೋಮಲ್‌ಗೆ ಸೋನಾಲ್ ಮೊಂತೆರೊ ನಾಯಕಿ!

ಪೋಸ್ಟ್ ಶೇರ್ ಮಾಡಿ
'ರೋಲೆಕ್ಸ್'ನಲ್ಲಿ ಕೋಮಲ್‌ಗೆ ಸೋನಾಲ್ ಮೊಂತೆರೊ ನಾಯಕಿ!

ಶ್ರೀನಿವಾಸ್‌ ಮಂಡ್ಯ ನಿರ್ದೇಶನದ ”ರೋಲೆಕ್ಸ್‌’ ಸಿನಿಮಾದಲ್ಲಿ ನಟ ಕೋಮಲ್‌ರಿಗೆ ನಾಯಕಿಯಾಗಿ ಸೋನಾಲ್‌ ಮೊಂತೆರೊ ನಟಿಸುತ್ತಿದ್ದಾರೆ. ಕಾಮಿಡಿ – ಫ್ಯಾಮಿಲಿ ಡ್ರಾಮಾ ಜಾನರ್‌ ಚಿತ್ರವಿದು. ನಟ ವಿನೋದ್‌ ಪ್ರಭಾಕರ್‌ ಈ ಸಿನಿಮಾದ ವಿಶೇಷ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.

ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌’ರೋಲೆಕ್ಸ್’. ಅಂಬಟಿ ಮಧು ಮೋಹನಕೃಷ್ಣ ಅವರು ಪ್ರಸ್ತುತ ಆಂದ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹೌದು. ಈ ಹಿಂದೆ ‘ಬಿಲ್ ಗೇಟ್ಸ್’ ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಟ ವಿನೋದ್ ಪ್ರಭಾಕರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿರುವುದು. ಈವರೆಗೂ ಮಾಡಿರದ ಪಾತ್ರದಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ.

ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಕೋಮಲ್ ಅವರು ಈ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ‘ರೋಲೆಕ್ಸ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್‌ ಕುಮಾರ್‌, ನವೀನ್ ಪಡೀಲ್, ಅರುಣ ಬಾಲರಾಜ್ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ವಿ. ನಾಗೇಂದ್ರಪ್ರಸಾದ್, ಕವಿರಾಜ್, ರಾಜೇಶ್ ವರ್ಮ ಹಾಗೂ ಕಿನ್ನಾಳ್ ರಾಜ್ ಗೀತರಚನೆ ಮಾಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಯೋಗಾನಂದ್ ಸಾಹಸ ನಿರ್ದೇಶನ ಹಾಗೂ ಕಲೈ – ಮುರಳಿ ಅವರ ನೃತ್ಯ ನಿರ್ದೇಶ‌‌ನವಿರುವ ಚಿತ್ರಕ್ಕೆ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈ ಬರಹಗಳನ್ನೂ ಓದಿ